22-06-2024
44 Likes
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ. ನಮ್ಮ ಭಾವನೆಗಳನ್ನು ಮತ್ತು ಅಭಿಪ್ರಾಯಗಳನ್ನು ಇತರರಿಗೆ ವ್ಯಕ್ತಪಡಿಸುವುದಕ್ಕೆ ಮತ್ತು ಅವರ ಅಭಿಪ್ರಾಯಗಳನ್ನು ಮತ್ತು ಭಾವನೆಗಳನ್ನು ನಾವು ತಿಳಿಯುವ ಮಾಧ್ಯಮಕ್ಕೆ ಭಾಷೆ ಎಂದು ಹೆಸರು. ಭಾಷೆಯನ್ನು ಸರಿಯಾದ ವಿಧಾನದಲ್ಲಿ ಬಳಸಲು ಹಾಗೂ ಸಾಮಾನ್ಯಗೊಳಿಸಲು ಇರುವ ಮಾರ್ಗದರ್ಶಿಯನ್ನು ವ್ಯಾಕರಣ ಎನ್ನುತ್ತಾರೆ.
5 Comments
user comments
Saathwik
22-10-2024Sneha
22-11-2024Likhith
20-09-2024Varshal
15-10-2024Raksha
25-10-2024Shubha
21-08-2024